ಗೌಡಳ್ಳಿ ಕೆರೆ ಹಾನಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ – ಅಧಿಕಾರಿಗಳಿಗೆ ತೀವ್ರ ತರಾಟೆ
ಶಿರಸಿ: ತಾಲೂಕಿನ ಗೌಡಳ್ಳಿ ಕೆರೆಯ ಹತ್ತಿರ ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಕ್ಕೆ ಇಂದು ಶಾಸಕರಾದ ಭೀಮಣ್ಣ ನಾಯ್ಕ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳ ಪರಿಶೀಲನೆ ನಡೆಸಿದ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾರ್ವಜನಿಕರಿಗೆ ಮತ್ತು ರೈತರಿಗೆ ತೊಂದರೆಯಾದರೆ ನಾನು ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ತಕ್ಷಣವೇ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಿ, ಕೈಗೊಂಡ ಕ್ರಮಗಳ ಕುರಿತು ನನಗೆ ಮಾಹಿತಿ ನೀಡಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟುವಾಗಿ ಸೂಚನೆ ನೀಡಿದರು.
