ಗ್ಯಾರೆಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹರಿಗೂ ತಲುಪಲಿ; ಭೀಮಣ್ಣ ನಾಯ್ಕ
oplus_10485760
ಶಿರಸಿ:ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಯಶಸ್ವಿಯಾಗಿ ತಲುಪುವಂತೆ ಮಾಡಲು ಅಧಿಕಾರಿಗಳು ಮತ್ತು ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು ಸಮನ್ವಯತೆಯಿಂದ ಶ್ರಮಿಸಬೇಕು ಎಂದು ಮಾನ್ಯ ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ್ ಅವರು ಕರೆ ನೀಡಿದರು.

ಇಂದು ಶಿರಸಿಯಲ್ಲಿ ಜರುಗಿದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಯ ಸಮಿತಿ ಪದಾಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಎದುರಾಗುವ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಶ್ರಮಿಸಿ ಯಾವುದೇ ಒಬ್ಬ ಅರ್ಹ ಫಲಾನುಭವಿಯೂ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
