ಜಿಲ್ಲೆಯಲ್ಲಿ ಭಾರೀ ಮಳೆ-ಜೋಯಿಡಾ, ದಾಂಡೇಲಿ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

0
file_00000000ad948211a151c994efe55176

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಸೋಮವಾರವೂ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಶಾಲೆಗೆ ಬರುವ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಎರಡು ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದ್ದಾರೆ.

ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಶಾಲೆಗಳಿಗೆ ಈ ರಜೆ ನಿಯಮ ಅನ್ವಯ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲೆಡೆ ಆಗಸ್ಟ್ 3ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯೂ ಜೋಯಿಡಾ-ದಾಂಡೇಲಿ ಭಾಗದಲ್ಲಿ ಅಧಿಕ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಅದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದಾಂಡೇಲಿ-ಜೋಯಿಡಾದ ತಹಶೀಲ್ದಾರರು ರಜೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಜೋಯಿಡಾ ಹಾಗೂ ದಾಂಡೇಲಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *