ಶಿಕ್ಷಣ ಸಚಿವ ಮಧು ಬಂಗಾರಪ್ಪ ನೂತನ ಕಚೇರಿ ಪೂಜೆಯಲ್ಲಿ ಭಾಗಿಯಾದ ಶಾಸಕ ಭೀಮಣ್ಣ ನಾಯ್ಕ

0
IMG-20260813-WA0035

ಬೆಂಗಳೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರ ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ನೂತನ ಕಚೇರಿ (ಕೊಠಡಿ ಸಂಖ್ಯೆ 262, 262(A)) ಯಲ್ಲಿ ಇಂದು ಜರುಗಿದ ದೇವತಾ ಪ್ರಾರ್ಥನೆ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ ಅವರು ಪಾಲ್ಗೊಂಡು, ಸಚಿವರಿಗೆ ಶುಭ ಕೋರಿದರು.​

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಭೀಮಸೇನ ಬಿ. ಚಿಮ್ಮನಕಟ್ಟಿ, ಪಕ್ಷದ ಹಿರಿಯ ನಾಯಕರು, ಶಿಕ್ಷಣ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿ ವರ್ಗ, ಆತ್ಮೀಯರು ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದು ಸಚಿವರಿಗೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ ಅವರು, “ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸಕಾರಾತ್ಮಕ ಬದಲಾವಣೆಗಳನ್ನು ತಂದು, ನಾಡಿನ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲು ಸಚಿವ ಮಧು ಬಂಗಾರಪ್ಪ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಹಾಗೂ ಆಶೀರ್ವಾದ ಸದಾ ಇರಲಿದೆ. ಅವರ ನೇತೃತ್ವದಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರವು ಮತ್ತಷ್ಟು ಸಾಧನೆಯ ಶಿಖರಕ್ಕೇರಲಿ” ಎಂದರು.

Leave a Reply

Your email address will not be published. Required fields are marked *