ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವರಾದ ಲಕ್ಷ್ಮಣ್ ಸವದಿ ಹಾಗೂ ಶಾಸಕ ಭೀಮಣ್ಣ ನಾಯ್ಕ ಸಮ್ಮುಖದಲ್ಲಿ ಪ್ರಮುಖ ಸಭೆ
ಶಿರಸಿ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪ್ರಮುಖ ಸಭೆಯಲ್ಲಿ ಸಚಿವ ಲಕ್ಷ್ಮಣ್ ಸವದಿ ಹಾಗೂ ಶಾಸಕ ಭೀಮಣ್ಣ ನಾಯ್ಕ ಅವರು ಭಾಗವಹಿಸಿ, ಕ್ಷೇತ್ರದ ವಿವಿಧ ಅಭಿವೃದ್ಧಿ ವಿಷಯಗಳು ಹಾಗೂ ಪಕ್ಷದ ಸಂಘಟನೆ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಸಭೆಯ ನಂತರ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ ಅವರು, “ಶಿರಸಿ ಭಾಗದ ಪ್ರಚಲಿತ ಸಮಸ್ಯೆಗಳು, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸರ್ಕಾರದಿಂದ ಕ್ಷೇತ್ರಕ್ಕೆ ತರಬೇಕಾದ ವಿವಿಧ ಯೋಜನೆಗಳ ಕುರಿತು ಮಾನ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಶ್ರಮಿಸಲಾಗುವುದು” ಎಂದು ತಿಳಿಸಿದರು.

ಈ ಪ್ರಮುಖ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಿರಿಯ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
