ಶಿರಸಿ-ಸಿದ್ದಾಪುರ ತಾಲೂಕಿನ ಅತಿವೃಷ್ಟಿ/ಅನಾವೃಷ್ಟಿ ಪರಿಸ್ಥಿತಿ ಪರಿಶೀಲನೆ
ಶಿರಸಿ: ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಉಂಟಾಗಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯ ಕುರಿತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಶಿರಸಿಯ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಇಂದು ಮಹತ್ವದ ಸಮೀಕ್ಷಾ ಸಭೆ ಜರುಗಿತು. ಉಸ್ತುವಾರಿ ಸಚಿವ ಲಕ್ಷ್ಮಣ್ ಸವದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ಸಕ್ರಿಯವಾಗಿ ಪಾಲ್ಗೊಂಡು ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿದರು.

ಸಚಿವ ಲಕ್ಷ್ಮಣ್ ಸವದಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಹಾಗೂ ನಷ್ಟದ ನಿಖರ ವರದಿಯನ್ನು ತಕ್ಷಣವೇ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಶಿರಸಿ ಮತ್ತು ಸಿದ್ದಾಪುರ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
