ಯುವ ಸಂಕಲ್ಪ ಕಾರ್ಯಕ್ರಮ ಯಶಸ್ವಿ- ಯುವ ಸಂಘಟನೆಯ ಮಹತ್ವ ತಿಳಿಸಿದ ಸುನೀಲ್ ಕುಮಾರ್

0
WhatsApp Image 2026-08-03 at 11.27.12

ಹೊನ್ನಾವರ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಹೊನ್ನಾವರ ಮಂಡಲದ ವತಿಯಿಂದ ಯುವ ಸಂಕಲ್ಪ ಕಾರ್ಯಕ್ರಮ (ಪ್ರತಿಜ್ಞಾ ವಿಧಿ ಹಾಗೂ ಸಂಘಟನಾ ಸಪ್ತಾಹ) ಭಾನುವಾರ ಯಶಸ್ವಿಯಾಗಿ ನೆರವೇರಿತು.

ಕುಮಟಾ-ಹೊನ್ನಾವರ ಶಾಸಕ ದಿನಕರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಸೇವೆ ಹಾಗೂ ಯುವಜನರ ಪಾತ್ರದ ಕುರಿತು ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಕಾರ್ಕಳ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಯುವ ಸಂಘಟನೆಯ ಅಗತ್ಯತೆ, ಹೋರಾಟದ ಜೀವನದ ಮೌಲ್ಯ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರದ ಕುರಿತು ಅವರು ಪ್ರೇರಣಾದಾಯಕವಾಗಿ ಮಾತನಾಡಿ ಯುವಕರಲ್ಲಿ ಹೊಸ ಚೈತನ್ಯ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನಾಯ್ಕ ಅವರು ಯುವಮೋರ್ಚಾ ಹೊನ್ನಾವರ ಮಂಡಲದ ನೂತನ ಕಾರ್ಯಕಾರಿಣಿ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿ, ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಂಕಲ್ಪವನ್ನು ಮೂಡಿಸಿದರು.

ಅದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಅವರು ಯುವಮೋರ್ಚಾ ಹೊನ್ನಾವರ ಮಂಡಲದ ಸಂಘಟನಾ ಸಪ್ತಾಹ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು.

ಮಾಜಿ ಶಾಸಕಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ಸಂಘಟನಾತ್ಮಕವಾಗಿ ಬೆಂಬಲವಾಗಿ ಇರುತ್ತೇನೆ ಎಂದು ಆಶ್ವಾಸನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಹೆಗಡೆ ಹಾಗೂ ಯುವ ಮೋರ್ಚಾ ಅಧ್ಯಕ್ಷ ಶಿವಾನಂದ ಮರಾಠಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲ ಅಧ್ಯಕ್ಷ ಯೋಗೇಶ ಮೇಸ್ತ ಸರ್ವರನ್ನೂ ವಂದಿಸಿದರು.

ಈ ವೇಳೆ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ್ ನಾಯ್ಕ ಭಟ್ಕಳ, ಗುರುಪ್ರಸಾದ ಹೆಗಡೆ ಹರ್ತೆಬೈಲ್, ಪ್ರಶಾಂತ ನಾಯ್ಕ, ಈಶ್ವರ ನಾಯ್ಕ, ಗೋವಿಂದ ನಾಯ್ಕ, ವೆಂಕಟೇಶ ನಾಯಕ, ಕಮಲಾ ನಾಯ್ಕ, ಕೆ ಜಿ ನಾಯ್ಕ, ಎಂ ಜಿ ಭಟ್ಟ, ಸುಬ್ರಾಯ ವಾಳ್ಕೆ, ಜಿ ಎಸ್ ಗುನಗ, ಶ್ರೀ ಶ್ರೀಕಾಂತ ನಾಯ್ಕ, ರತ್ನಾಕರ ಹೆಗಡೆ, ರಾಜೇಶ ಭಂಡಾರಿ, ಮಂಜುನಾಥ ನಾಯ್ಕ, ಜಿ.ಜಿ ಶಂಕರ, ಚಂದ್ರು ಎಸಳೆ, ಜಾಯ್ಸನ್ ಡಿಸೋಜ, ಪ್ರಮೋದ ನಾಯ್ಕ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ರಾಜ್ಯ, ಜಿಲ್ಲಾ ಹಾಗೂ ಮಂಡಲದ ವಿವಿಧ ಸ್ಥರದ ಮುಖಂಡರುಗಳು, ಎಲ್ಲಾ ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ಮತ್ತು ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಅನನ್ಯ ಜವಾಬ್ದಾರಿಗಳಿರುವ ಕಾರ್ಯಕರ್ತರು, ಯುವಮೋರ್ಚಾದ ಸಮಸ್ತ ತಂಡ, ಅಪಾರ ಸಂಖ್ಯೆಯಲ್ಲಿ ಯುವಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Leave a Reply

Your email address will not be published. Required fields are marked *